23 ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
23 ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.
23 ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.
23 ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
23 ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.