ಮತ್ತಾಯ 21:32 - ದೆವಾಚಿ ಖರಿ ಖಬರ್32 ಜುವಾಂವ್ ಬಾವ್ತಿಸ್ ತುಮ್ಕಾ ಬರಿ ವಾಟ್ ದಾಕ್ವುಕ್ ಮನುನ್ ಯೆಲೊ, ಖರೆ ತುಮಿ ತೆಚೆ ವರ್‍ತಿ ವಿಶ್ವಾಸ್ ಕರುಕ್ನ್ಯಾಶಿ, ಖರೆ ತೆರ್‍ಗಿ ವಸುಲ್ ಕರ್‍ತಲ್ಯಾನಿ ಅನಿ ವೆಭಿಚಾರ್ ಕರ್‍ತಲ್ಯಾ ಲೊಕಾನಿ ತೆಚೆ ವರ್‍ತಿ ವಿಶ್ವಾಸ್ ಕರ್‍ಲ್ಯಾನಿ. ಹೆ ಸಗ್ಳೆ ಬಗುನ್ಬಿ ತುಮಿ ತುಮ್ಚಿ ಮನಾ ಬದ್ಲುನ್ ತೆಚೆ ವರ್‍ತಿ ವಿಶ್ವಾಸ್ ಕರುಕ್‍ನ್ಯಾಶಿ.” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.” ಅಧ್ಯಾಯವನ್ನು ನೋಡಿ |