41 ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
41 ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.
41 ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.