ಮತ್ತಾಯ 21:9 - ದೆವಾಚಿ ಖರಿ ಖಬರ್9 ಜೆಜುಚ್ಯಾ ಫಿಡೆ ಅನಿ ಫಾಟಿ ಹೊತ್ತ್ಯಾ ಲೊಕಾನಿ. “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್! ಧನಿಯಾಚ್ಯಾ ನಾವಾನ್ ಯೆತಲ್ಯಾಕ್ ದೆವ್ ಆಶಿರ್ವಾದ್ ದಿಂವ್ದಿ! ದೆವಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು. ಅಧ್ಯಾಯವನ್ನು ನೋಡಿ |