ಮತ್ತಾಯ 25:20 - ದೆವಾಚಿ ಖರಿ ಖಬರ್20 ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಘೆಟಲ್ಲೊ ಫಿಡೆ ಯೆಲೊ ಅನಿ ಅನಿ ಪಾಂಚ್ ಹಜಾರ್ ಗಾಲಿಯಾ ದಿವ್ನ್, ಮಾಲಿಕ್, ತುಮಿ ಮಾಕಾ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ, ಖರೆ ಮಿಯಾ ಅನಿ ಪಾಂಚ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು - ಸ್ವಾಮೀ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದಿಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು. ಅಧ್ಯಾಯವನ್ನು ನೋಡಿ |