ಮತ್ತಾಯ 26:58 - ದೆವಾಚಿ ಖರಿ ಖಬರ್58 ಪೆದ್ರು ಧುರ್-ಧುರ್‍ನಾಚ್ ತೆಂಚ್ಯಾ ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಪತರ್ ಯೆಲೊ, ತೊ ದಾರಾತ್ ಭುತ್ತುರ್ ಗುಸ್ಲೊ ಅನಿ ಕಾಯ್ ಕಾಯ್ ಹೊತಾ ಬಗುಸಾಟ್ನಿ ಮನುನ್ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |