ಮತ್ತಾಯ 26:62 - ದೆವಾಚಿ ಖರಿ ಖಬರ್62 ತನ್ನಾ ಮಹಾಯಾಜಕ್ ಇಬೆ ರ್‍ಹಾಲೊ ಅನಿ,“ ಹೆನಿ ತುಜೆ ವರ್‍ತಿ ಘಾಲ್ತಲ್ಯಾ ಹ್ಯಾ ಅಪ್ವಾದಾಚ್ಯಾ ವಿಶಯಾತ್ ತಿಯಾ ಕಾಯ್ಬಿ ಸಾಂಗಿನೆಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಆಗ ಪ್ರಧಾನಯಾಜಕರು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ಆಗ ಮಹಾಯಾಜಕನು ಎದ್ದು ನಿಂತು - ನೀನೇನೂ ಉತ್ತರ ಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |