ಮತ್ತಾಯ 27:31 - ದೆವಾಚಿ ಖರಿ ಖಬರ್31 ತೆಂಚೆ ಎಡ್ಸಡುನ್ ಸರಲ್ಲ್ಯಾ ತನ್ನಾ ತೆನಿ ತೆಕಾ ನೆಸ್ವಲ್ಲೊ ತಾಂಬ್ಡೊ ಝಗೊ ವೊಡುನ್ ಕಾಡ್ಲ್ಯಾನಿ ಅನಿ ತೆಚೆ ಅದ್ದಿಚೆಚ್ ಕಪ್ಡೆ ತೆಕಾ ನೆಸ್ವುಲ್ಯಾನಿ. ಮಾನಾ ತೆನಿ ತೆಕಾ ಕುರ್ಸಾರ್ ಮಾರುಕ್ ಘೆವ್ನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು. ಅಧ್ಯಾಯವನ್ನು ನೋಡಿ |