ಮತ್ತಾಯ 4:6 - ದೆವಾಚಿ ಖರಿ ಖಬರ್6 ಅನಿ ತೆಕಾ ತಿಯಾ ದೆವಾಚೊ ಲೆಕ್ ಜಾಲ್ಯಾರ್, ಹಿತ್ನಾ ಖಾಲ್ತಿ ಹುಡಿ ಮಾರ್, ಪವಿತ್ರ್ ಪುಸ್ತಕ್ ಸಾಂಗ್ತಾ, ದೆವ್ ಅಪ್ನಾಚ್ಯಾ ದುತಾಕ್ನಿ ಹುಕುಮ್ ದಿತಾ; ತುಜೆ ತಳ್‍ಪಾಯ್ ಸೈತ್ ಗುಂಡ್ಯಾಕ್ನಿ ಅದ್ಳಿ ನಸಿ ಸರ್ಕೆ ತೆನಿ ಅಪ್ನಾಚ್ಯಾ ಹಾತಾನಿ ತುಕಾ ಉಕ್ಲುನ್ ಧರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು. ಅಧ್ಯಾಯವನ್ನು ನೋಡಿ |