ಮತ್ತಾಯ 5:15 - ದೆವಾಚಿ ಖರಿ ಖಬರ್15 ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ಥೈನಾ; ಘರಾತ್ಲ್ಯಾ ಸಗ್ಳ್ಯಾಕ್ನಿ ಉಜ್ವೊಡ್ ದಿವ್ಕ್ ಮನುನ್ ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. ಅಧ್ಯಾಯವನ್ನು ನೋಡಿ |