ಮತ್ತಾಯ 5:25 - ದೆವಾಚಿ ಖರಿ ಖಬರ್25 “ಕೊನ್ ತರ್ ತುಜ್ಯಾ ವಿರೊದ್ ಪಿರ್ಯಾದ್ ದಿವ್ನ್ ತುಕಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚ್ಯಾಕ್ನಾ ರಾಜಿ ಹೊ. ಎಗ್ದಾ ತಿಯಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲೆ ತರ್, ತೊ ತುಕಾ ನ್ಯಾಯ್ ಕರ್‍ತಲ್ಯಾ ಮಾನ್ಸಾಚ್ಯಾ ಹಾತಿತ್ ದಿತಾ, ಅನಿ ತೊ ತುಕಾ ಅದಿಕಾರ್‍ಯಾಂಚ್ಯಾ ಹಾತಿತ್ ದಿತಾ, ಅನಿ ತುಕಾ ಬಂದಿಖಾನ್ಯಾತ್ ಘಾಲ್ತ್ಯಾತ್.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ. ಅಧ್ಯಾಯವನ್ನು ನೋಡಿ |