ಮತ್ತಾಯ 5:45 - ದೆವಾಚಿ ಖರಿ ಖಬರ್45 ಅಶೆ ತುಮಿ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಚಿ ಪೊರಾ ಹೊತ್ಯಾಶಿ, ತೊ ಬರ್‍ಯಾ ಲೊಕಾಂಚ್ಯಾ ವರ್‍ತಿಬಿ ಬುರ್ಶಾ ಲೊಕಾಂಚ್ಯಾ ವರ್‍ತಿಬಿ ಅಪ್ನಾಚೊ ದಿಸ್ ಉಗಿಸರ್ಕೆ ಕರ್‍ತಾ. ಅನಿ ಬರೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಬುರ್ಶೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಪಾವ್ಸ್ ಧಾಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ. ಅಧ್ಯಾಯವನ್ನು ನೋಡಿ |