ಮತ್ತಾಯ 6:25 - ದೆವಾಚಿ ಖರಿ ಖಬರ್25 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ತುಮಿ ಬಾಳ್ವಿ ಕರುಕ್ ಪೊಟಾಕ್ ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾಜಾಲ್ಯಾರ್ ಆಂಗಾರ್ ನೆಸ್ತಲ್ಯಾ ಕಪ್ಡ್ಯಾಂಚ್ಯಾ ವಿಶಯಾತ್ ಯವ್ಜುನಕಾಶಿ, ಖಾತಲ್ಯಾಚ್ಯಾನ್ಕಿ ಜಿವ್ ಕವ್ಡ್ಯಾಕಿ ಕಿಮ್ತಿಚೊ ಹೊಯ್ ಕಾಯ್ ನ್ಹಯ್? ಅನಿ ಕಪ್ಡ್ಯಾಂಚ್ಯಾನ್ಕಿ ಆಂಗ್ ಕವ್ಡ್ಯಾಕಿ ಕಿಮ್ತಿಚೆ ಹೊಯ್ ಕಾಯ್ ನ್ಹಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ? ಅಧ್ಯಾಯವನ್ನು ನೋಡಿ |