ಮತ್ತಾಯ 6:6 - ದೆವಾಚಿ ಖರಿ ಖಬರ್6 ಖರೆ ತುಮಿ ಮಾಗ್ನಿ ಕರ್‍ತಾನಾ, ತುಮ್ಚ್ಯಾ ಖೊಲಿತ್ ಭುತ್ತುರ್ ಜಾವಾ ದಾರ್ ಧಾಪಾ, ಅನಿ ದಿಸಿನಸಲ್ಲ್ಯಾ ತುಮ್ಚ್ಯಾ ಬಾಬಾಕ್ಡೆ ಮಾಗಾ, ಅನಿ ತುಮಿ ಕೊನಾಕ್ಬಿ ಗೊತ್ತ್ ನಸ್ತಾನಾ ಕರಲ್ಲೆ ಬಗಟಲ್ಲೊ ಸರ್‍ಗಾ ವೈಲೊ ತುಮ್ಚೊ ಬಾಬಾ ತುಮ್ಕಾ ಪ್ರತಿಫಳ್ ದಿತಾ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು. ಅಧ್ಯಾಯವನ್ನು ನೋಡಿ |