ಮತ್ತಾಯ 9:13 - ದೆವಾಚಿ ಖರಿ ಖಬರ್13 ಜಾವಾ, ಅನಿ ಪವಿತ್ರ್ ಪುಸ್ತಕ್, ಮಾಕಾ ದಯಾ ಪಾಜೆ, ಜನಾವರಾಂಚಿ ಬಲಿ ನಕ್ಕೊ ಮನುನ್ ಸಾಂಗಲ್ಲ್ಯಾಚೊ ಅರ್ತ್ ಕಾಯ್ ಮನುನ್ ಹುಡ್ಕುನ್ ಕಾಡಾ. ಮಿಯಾ ಧರ್ಮಾನಿ ಚಲ್ತಲ್ಯಾ ಲೊಕಾಂಚ್ಯಾ ಸಾಟ್ನಿ ಯೆವ್ಕ್ ನಾ, ಪಾಪಿ ಲೊಕಾಂಚ್ಯಾ ಸಾಟ್ನಿ ಯೆಲಾ”. ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |