ಮತ್ತಾಯ 9:15 - ದೆವಾಚಿ ಖರಿ ಖಬರ್15 ತನ್ನಾ ಜೆಜುನ್ ತೆಂಕಾ, “ಲಗ್ನಾಚೊ ನ್ಹವ್ರೊ ವಾಂಗ್ಡಾ ರ್‍ಹಾತಾನಾ, ಲಗ್ನಾಕ್ ಯೆಲ್ಲ್ಯಾ ಸೊಯ್ರ್ಯಾನಿ ಬೆಜಾರಾತ್ ರ್‍ಹಾವ್ಕ್ ಹೊತಾ ಕಾಯ್? ನಾ, ಹೊಯ್ನಾ! ಖರೆ ತೆಂಚ್ಯಾ ಮದ್ನಾ ನ್ಹವ್ರ್ಯಾಕ್ ಕಾಡುನ್ ಘೆವ್ನ್ ಜಾತಲೊ ಎಳ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಟ್ಟಾರೋ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು. ಅಧ್ಯಾಯವನ್ನು ನೋಡಿ |