ಮತ್ತಾಯ 9:27 - ದೆವಾಚಿ ಖರಿ ಖಬರ್27 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ದೊಗೆ ಜಾನಾ ಕುಡ್ಡೆ ಜೆಜುಚ್ಯಾ ಫಾಟ್ನಾ ಯೆವ್ನಗೆತ್ “ಜೆಜು, ದಾವಿದಾಚ್ಯಾ ಲೆಕಾ ಅಮ್ಚಿ ದಯಾ ಕರ್” ಮನುನ್ ಬೊಬ್ ಮಾರುಕ್‍ಲಾಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು. ಅಧ್ಯಾಯವನ್ನು ನೋಡಿ |