ಮಾರ್ಕ 1:45 - ದೆವಾಚಿ ಖರಿ ಖಬರ್45 ಖರೆ ತೊ ಥೈತ್ನಾ ಗೆಲೊ, ಅನಿ ಸಗ್ಳ್ಯಾಕ್ಡೆ ಹಿ ಖಬರ್ ಸಾಂಗುನ್ಗೆತ್ ಗೆಲೊ. ತಸೆ ಮನುನ್ ಜೆಜುಕ್, ಖಲ್ಯಾಬಿ ಗಾಂವಾತ್ ಬಹಿರಂಗ್ ಫಿರುಕ್ ಹೊವುಕ್ನಾ. ತೆಕಾ ಕೊನ್ ಲೊಕಾ ನಸಲ್ಲೆ ಜಾಗೆ ಬಗುನ್, ರ್‍ಹಾತಲೆ ಪಡ್ಲೆ. ಜಾಲ್ಯಾರ್‍ಬಿ ಸಗ್ಳ್ಯಾಕ್ನಾ ಲೊಕಾ ಜೆಜುಕ್ಡೆ ಯೆಂವ್ಗೆತುಚ್ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿ |