ಮಾರ್ಕ 1:6 - ದೆವಾಚಿ ಖರಿ ಖಬರ್6 ಜುವಾಂವ್ ಒಂಟೆಚ್ಯಾ ಕೆಸಾನಿ ಕರಲ್ಲ್ಯಾ ಫಾಳಿಯಾ ನೆಸಿ, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಲಪ್ಟುನ್ ಘೆಯ್, ಅನಿ ಟುಪ್ಪುನ್ಯಾ ಅನಿ ಮಾಂವ್ ಖಾವ್ನ್ ತೊ ಜಿವನ್ ಕರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ಯೋಹಾನನು ಒಂಟೆಯ ಕೂದಲಿನ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ವಿುಡಿತೆಯನ್ನೂ ಕಾಡುಜೇನನ್ನೂ ಆಹಾರ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು. ಅಧ್ಯಾಯವನ್ನು ನೋಡಿ |