ಮಾರ್ಕ 13:1 - ದೆವಾಚಿ ಖರಿ ಖಬರ್1 ಜೆಜು ದೆವಾಚ್ಯಾ ಗುಡಿತ್ನಾ ಬಾಯ್ರ್ ಯೆತಾನಾ, ತೆಚ್ಯಾ ಶಿಸಾನಿತ್ಲೊ ಎಕ್ಲೊ “ಗುರುಜಿ! ಅಬಕ್, ಕವ್ಡೆ ಬರೆ ಗುಂಡೆ ಅನಿ ಭಾಂದಾಪ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ದೇವಾಲಯದಿಂದ ಹೊರಗೆ ಬರುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು, “ಗುರುವೇ, ಅತ್ತ ನೋಡಿ; ಎಂಥ ಬಾರಿ ಕಲ್ಲುಗಳು! ಎಷ್ಟು ರಮ್ಯವಾದ ಕಟ್ಟಡಗಳು!” ಎಂದು ವರ್ಣಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ದೇವಾಲಯವನ್ನು ಬಿಟ್ಟು ಹೋಗುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಗುರುವೇ, ನೋಡು, ಎಂಥಾ ಕಲ್ಲುಗಳು! ಎಂಥಾ ಕಟ್ಟಣಗಳು! ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು. ಅಧ್ಯಾಯವನ್ನು ನೋಡಿ |