ಮಾರ್ಕ 13:32 - ದೆವಾಚಿ ಖರಿ ಖಬರ್32 ತೊ ದಿಸ್ ಹೊಂವ್ದಿ, ಎಳ್ ಹೊಂವ್ದಿ, ಕನ್ನಾ ಯೆತಾ ಮನುನ್ ಸರ್ಗಾತ್ಲ್ಯಾ ದೆವಾಚ್ಯಾ ದುತಾಕ್ನಿ ಹೊಂವ್ದಿ, ಲೆಕಾಕ್ ಹೊಂವ್ದಿ ಗೊತ್ತ್ ನಾ. ಬಾಬಾಕ್ ಎಕ್ಲ್ಯಾಕುಚ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು. ಅಧ್ಯಾಯವನ್ನು ನೋಡಿ |