55 ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
55 ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
55 ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.