ಮಾರ್ಕ 5:23 - ದೆವಾಚಿ ಖರಿ ಖಬರ್23 ಅನಿ “ಮಾಜಿ ಅಪುರ್ಬಾಯೆಚಿ ಲೆಕ್ ಶಿಕ್ ಹಾಯ್, ದಯಾ ಕರುನ್ ತಿಯಾ ಯೆವ್ನ್, ತಿಚ್ಯಾ ವರ್‍ತಿ ಹಾತ್ ಥವ್, ಹೆಚ್ಯಾನಿ, ತಿ ಬರಿ ಹೊತಾ, ಅನಿ ತಿ, ಹುರ್ತಾ” ಮನುನ್ ಲೈ ಮಾಗುಕ್‍ಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿ |