ಮಾರ್ಕ 5:7 - ದೆವಾಚಿ ಖರಿ ಖಬರ್7 “ಜೆಜು ಪರಮೊನ್ನತ್ ದೆವಾಚ್ಯಾ ಲೆಕಾ! ತಿಯಾ ಮಾಜ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ತಿಯಾ, ಮಾಕಾ ಶಿಕ್ಷಾ ದಿವ್‍ನಕೊ, ಮನುನ್ ದೆವಾಚ್ಯಾ ನಾಂವಾನ್, ಮಿಯಾ ತುಜ್ಯಾಕ್ಡೆ ಮಾಗ್ತಾ!” ಮನುನ್ ಬೊಬ್ ಮಾರುಕ್‍ಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7-8 ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು. ಅಧ್ಯಾಯವನ್ನು ನೋಡಿ |