24 ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
24 ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ.
24 ಅಲ್ಲಿಂದ ಯೇಸು ಎದ್ದು ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳುಕೊಂಡು ಅದು ಯಾರಿಗೂ ಗೊತ್ತಾಗಬಾರದೆಂದಿದ್ದನು; ಆದರೆ ಆತನು ಗುಪ್ತವಾಗಿರುವದಕ್ಕೆ ಆಗದೆ ಹೋಯಿತು.
24 ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
24 ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.