ಮಾರ್ಕ 8:38 - ದೆವಾಚಿ ಖರಿ ಖಬರ್38 ಹ್ಯಾ ಬುರ್ಶ್ಯಾ ಅನಿ ಪಾಪಿ ದಿಸಾತ್ನಿ, ಕೊನ್ ತರ್ ಎಕ್ಲೊ ಮಾನುಸ್ ಮಿಯಾ ಸಾಂಗಲ್ಲ್ಯಾ ಬರ್‍ಯಾ ಗೊಸ್ಟಿಯಾಂಚ್ಯಾಸಾಟಿ ನಾಜಾಲ್ಯಾರ್ ಮಾಜೆಸಾಟಿ ಲಜ್ತಾ ಹೊಲ್ಯಾರ್ ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ತನ್ನಾ ತೆಚೆಸಾಟ್ನಿ ಲಜ್ತಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |