31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
31 ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.
31 ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.
31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
31 ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.