ಮಾರ್ಕ 9:37 - ದೆವಾಚಿ ಖರಿ ಖಬರ್37 “ಜೊ ಮಾನುಸ್ ಎಕ್ ಬಾರಿಕ್ ಪೊರಾಕ್ ಮಾಜ್ಯಾ ನಾವಾನ್ ಸ್ವಿಕಾರ್ ಕರ್‍ತಾ, ತೊ ಮಾಕಾಚ್ ಸ್ವಿಕಾರ್ ಕರ್‍ತಾ, ಮಾಕಾ ಜೊ ಕೊನ್ ಸ್ವಿಕಾರ್ ಕರ್‍ತಾ ತೊ ಮಾಕಾ ಎವ್ಡೆಚ್ ನ್ಹಯ್, ಮಾಕಾ ಧಾಡಲ್ಲ್ಯಾಕುಚ್ ಸ್ವಿಕಾರ್ ಕರ್‍ತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿ |