ಯಾಕೋಬನು 1:12 - ದೆವಾಚಿ ಖರಿ ಖಬರ್12 ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು. ಅಧ್ಯಾಯವನ್ನು ನೋಡಿ |