ಯಾಕೋಬನು 3:2 - ದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್, ಅಮಿ ಸಗ್ಳಿ ಲೊಕಾ ಲೈಂದಾ ಚುಕುನ್ ಪಡ್ತಾವ್, ಬೊಲ್ನ್ಯಾತ್ ಸಮಾ ಹೊತ್ತೊ ಸಗ್ಳ್ಯಾ ಬರ್ಯಾ ಗುನಾನಿ ಭರುನ್ ರ್‍ಹಾತಾ ಅನಿ ಅಪ್ನಾಚ್ಯಾ ಅಂಗಾಕ್ ಹತೊಟಿತ್ ಥವ್ನ್ ಘೆತಲೊ ಬಳ್‌ಬಿ ತೆಕಾ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿ |