ಯೂದನು 1:12 - ದೆವಾಚಿ ಖರಿ ಖಬರ್12 ಹೆನಿ ತುಮ್ಚ್ಯಾ ಎಕ್ವಟಾಚೆ ಜೆವ್ನಾತ್ ತುಮ್ಚ್ಯಾ ವಾಂಗ್ಡಾ ಕಾಯ್ ಬಿ ಭಿಂಯೆ ನಸ್ತಾನಾ ಖಾತಾತ್ ಫಿತಾತ್ ಅನಿ ಅಪ್ನಾಚಿ ಪೊಟಾ ಭರುನ್ಗೆತಾತ್, ತೆನಿ ವಾರ್ಯಾಚ್ಯಾ ವಾಂಗ್ಡಾ ಹುಡುನ್ ಜಾತಲ್ಲ್ಯಾ ಪಾನಿ ನಸಲ್ಲ್ಯಾ ಮೊಡಾಂಚ್ಯಾ ಸಾರ್ಕೆ, ತೆನಿ ಕಾಲಾ ಕಾಲಾಕ್ ಫಳ್ ದಿನಸಲ್ಲ್ಯಾ ಝಾಡಾ ಸಾರ್ಕೆ, ಮುಳಾ ಸಮೆತ್ ಉಪ್ಳುನ್ ಪಡಲ್ಲ್ಯಾ ವಾಳುನ್ ಗೆಲ್ಲ್ಯಾ ಝಾಡಾ ಸಾರ್ಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ ಅಧ್ಯಾಯವನ್ನು ನೋಡಿ |