ಯೂದನು 1:4 - ದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ. ಅಧ್ಯಾಯವನ್ನು ನೋಡಿ |