ಯೂದನು 1:7 - ದೆವಾಚಿ ಖರಿ ಖಬರ್7 ಸೊದೊಮ್, ಗೊಮೊರ್ ಅನಿ ತೆಚ್ಯಾ ಆಜುಬಾಜುಕ್ ಹೊತ್ತ್ಯಾ ಶಾರಾಕ್ನಿ ಯಾದ್ ಕರುನ್ ಘೆವಾ, ಥೈತ್ಲ್ಯಾ ಲೊಕಾನಿಬಿ ತ್ಯಾ ದೆವಾಚ್ಯಾ ದುತಾಂಚ್ಯಾ ಸಾರ್ಕೆ ಅನೈತಿಕ್ ಶಾರಿರಿಕ್ ಸಮಂದ್ ಅನಿ ಸ್ವಭಾವಾ ಸಾರ್ಕೆ ಕರಿನಸ್ತಾನಾ ರ್‍ಹಾತಲೆ, ಪೊಜ್ಡೆಪಾನ್ ಕರ್ಲ್ಯಾನಿ. ಅಸೆ ತೆನಿ ಸಗ್ಳ್ಯಾಕ್ನಿ ಎಕ್ ಹುಶಾರ್ಕಿಚ್ಯಾ ರುಪಾತ್ ಕನ್ನಾಚ್ ಇಜಿನಸಲ್ಲ್ಯಾ ಆಗಿಚ್ಯಾ ಶಿಕ್ಷಾತ್ ಪಡ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ. ಅಧ್ಯಾಯವನ್ನು ನೋಡಿ |