ಯೋಹಾನ 14:11 - ದೆವಾಚಿ ಖರಿ ಖಬರ್11 ಬಾಬಾ ಮಾಜ್ಯಾ ಭುತ್ತುರ್ ಅನಿ ಮಿಯಾ ಬಾಬಾಚ್ಯಾ ಭುತ್ತುರ್ ಹಾಯ್ ಮನುನ್ ಮಿಯಾ ಸಾಂಗ್ತಾನಾ ಮಾಜೆ ವರ್ತಿ ವಿಶ್ವಾಸ್ ಕರಾ, ನಾಹೊಲ್ಯಾರ್, ಮಿಯಾ ಕರ್‍ತಲಿ ಕಾಮಾ ಸಾಕ್ಷಿ ಸಾಟ್ನಿ ಅಜಾಪಾ ಬಗುನ್ ತರ್ಬಿ ವಿಶ್ವಾಸ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ. ಅಧ್ಯಾಯವನ್ನು ನೋಡಿ |