ಯೋಹಾನ 14:24 - ದೆವಾಚಿ ಖರಿ ಖಬರ್24 ಜೆ ಕೊನ್ ಮಿಯಾ ಶಿಕ್ವಲ್ಲೆ ಶಿಕಾಪ್ ಮಾನುನ್ ಘೆಯ್‍ನ್ಯಾತ್, ತೆನಿ ಮಾಜೊ ಪ್ರೆಮ್ ಕರಿನ್ಯಾತ್, ತುಮಿ ಆಯ್ಕುಲ್ಯಾಶಿ ಹಿ ಶಿಕಾಪಾ ಮಾಜಿ ಸ್ವತಾಚಿ ನ್ಹಯ್, ಮಾಕಾ ಧಾಡುನ್ ದಿಲ್ಲ್ಯಾ ಬಾಬಾಚಿ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ. ಅಧ್ಯಾಯವನ್ನು ನೋಡಿ |