ಯೋಹಾನ 15:16 - ದೆವಾಚಿ ಖರಿ ಖಬರ್16 ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು. ಅಧ್ಯಾಯವನ್ನು ನೋಡಿ |