ಯೋಹಾನ 15:4 - ದೆವಾಚಿ ಖರಿ ಖಬರ್4 ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವಾ ಅನಿ ಮಿಯಾ ತುಮ್ಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ. ಖಲ್ಯಾಬಿ ಎಕ್ ಫಾಟ್ಯಾನ್ ಯೆಲಿಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ಫಳಾ ದಿವ್ಕ್ ಹೊಯ್ನಾ. ತಶೆಚ್ ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ತುಮಿ ಫಳ್ ದಿವ್ಕ್ ಹೊಯ್ನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ಅಧ್ಯಾಯವನ್ನು ನೋಡಿ |