ಯೋಹಾನ 18:37 - ದೆವಾಚಿ ಖರಿ ಖಬರ್37 ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿ |