ಯೋಹಾನ 19:7 - ದೆವಾಚಿ ಖರಿ ಖಬರ್7 ತನ್ನಾ ತ್ಯಾ ಜುದೆವಾನಿ “ಅಮ್ಕಾ ಎಕ್ ಖಾಯ್ದೊ ಹಾಯ್ ಅನಿ ತ್ಯಾ ಖಾಯ್ದ್ಯಾ ಪರ್‍ಕಾರ್ ಹೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಕುಚ್ ದೆವಾಚೊಲೆಕ್ ಮನುನ್ ಮಾನ್ತಾ” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |