ಯೋಹಾನ 2:10 - ದೆವಾಚಿ ಖರಿ ಖಬರ್10 ಅನಿ “ಸಗ್ಳಿ ಲೊಕಾ ಅದ್ದಿ ಬರೊ ವಾಯ್ನ್ ವಾಟ್ತ್ಯಾತ್, ಪಾವ್ನ್ಯಾನಿ ಪಿವ್ನ್ ಖುಶಿ ಹೊಲ್ಲ್ಯಾ ಮಾನಾ, ಸಾದ್ರನಾಚೊ ವಾಯ್ನ್ ವಾಟ್ತ್ಯಾತ್, ಖರೆ ತಿಯಾ ಅಜುನ್‍ಬಿ ಬರೊ ವಾಯ್ನ್ ಥವ್ಲೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು. ಅಧ್ಯಾಯವನ್ನು ನೋಡಿ |