ಯೋಹಾನ 2:6 - ದೆವಾಚಿ ಖರಿ ಖಬರ್6 ಜುದೆವ್ ಲೊಕಾಂಚ್ಯಾ ಖಾಯ್ದ್ಯಾಂಚ್ಯಾ ಸಾರ್ಕೆ ಹಾತ್-ಪಾಯ್ ಧುವ್ನ್ ಪವಿತ್ರ್ ಕರುನ್ ಘೆವ್ಕ್ ಮನುನ್ ಪಾನಿ ಭರುನ್ ಥವ್ತಲೆ, ಸಾ, ಮೊಟೆ ಗುಂಡ್ಯಾಂಚೆ ಢೊನೆ ಅಯ್ಸಿ ತೆ ಎಕ್ಸೆ ವಿಸ್ ಲಿಟರ್ ಪಾನಿ ಮಾವ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿ |