ಯೋಹಾನ 21:15 - ದೆವಾಚಿ ಖರಿ ಖಬರ್15 ತೆಂಚೆ ಖಾವ್ನ್ ಹೊಲ್ಲ್ಯಾ ತನ್ನಾ ಜೆಜುನ್ ಸಿಮಾವ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಸಗ್ಳ್ಯಾಚ್ಯಾನ್ಕಿ ಜಾಸ್ತಿ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ಪೆದ್ರುನ್ “ಹೊಯ್ ಧನಿಯಾ, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾಚ್ ಗೊತ್ತ್ ಹಾಯ್” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬೊಕ್ಡಾಕ್ನಿ ಚಾರ್‍ವು” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |