ಯೋಹಾನ 21:17 - ದೆವಾಚಿ ಖರಿ ಖಬರ್17 ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು. ಅಧ್ಯಾಯವನ್ನು ನೋಡಿ |