ಯೋಹಾನ 21:23 - ದೆವಾಚಿ ಖರಿ ಖಬರ್23 “ಅಶೆ ಹೊವ್ನ್ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾಂಚ್ಯಾ ಮದ್ದಿ ಹ್ಯೊ ಶಿಸ್ ಮರುಚೆ ನೈಯ್ ಮನ್ತಲಿ ಖಬರ್ ಉಟ್ಲಿ”. ಖರೆ ತೊ ಮರ್‍ತಲೆ ನಕ್ಕೊ ಮನುನ್ ಜೆಜುನ್ ಸಾಂಗುಕ್‍ನಾ. ತೆನಿ, “ಮಿಯಾ ಯೆಯ್ ಪತರ್ ಜರ್ ತರ್ ತೊ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ಮಾಕಾ ಪಾಜೆ ಹೊಲ್ಯಾರ್, ತುಕಾ ಕಶ್ಯಾಕ್ ಪಾಜೆ ತೆ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು. ಅಧ್ಯಾಯವನ್ನು ನೋಡಿ |