ಯೋಹಾನ 4:10 - ದೆವಾಚಿ ಖರಿ ಖಬರ್10 ತನ್ನಾ ಜೆಜುನ್ ತಿಕಾ “ದೆವ್ ಕಾಯ್ ದಿತಾ, ಅನಿ ಫಿವ್ಕ್ ಉಲ್ಲೆ ಪಾನಿ ದಿ ಮನುನ್ ತುಜೆಕ್ಡೆ ಮಾಗ್ತಲೊ ಕೊನ್ ಮನುನ್ ತುಕಾ ಗೊತ್ತ್ ರ್‍ಹಾಲ್ಯಾರ್, ತಿಯಾಚ್ ತೆಚೆಕ್ಡೆ ಮಾಗಿ ಹೊತ್ತೆ, ಅನಿ ತೊ ತುಕಾ ಜಿವ್‍ದಿತಲೆ ಪಾನಿ ದಿ ಹೊತ್ತೊ” ಮನುನ್ ಜಬಾಬ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |