ಯೋಹಾನ 4:21 - ದೆವಾಚಿ ಖರಿ ಖಬರ್21 ಜೆಜುನ್ ತಿಕಾ, “ಮಾಜೆ ವರ್ತಿ ವಿಶ್ವಾಸ್ ಕರ್, ಎಕ್ ಎಳ್ ಯೆತಾ ತನ್ನಾ ಲೊಕಾ ಮಡ್ಡಿ ವರ್ತಿ ಹೊಂವ್ದಿ, ಜೆರುಜಲೆಮಾತ್ ಹೊಂವ್ದಿತ್ ದೆವಾ ಬಾಬಾಚೆ ಆರಾದಾನ್ ಕರಿನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ. ಅಧ್ಯಾಯವನ್ನು ನೋಡಿ |