9 ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.
9 ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
9 ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.