ಯೋಹಾನ 5:13 - ದೆವಾಚಿ ಖರಿ ಖಬರ್13 ಖರೆ ತ್ಯಾ ಗುನ್ ಹೊಲ್ಲ್ಯಾ ಮಾನ್ಸಾಕ್ ಜೆಜು ಕೊನ್ ಮನುನ್ ಗೊತ್ತ್ ನತ್ತೆ ಥೈ ಲೊಕಾಂಚೊ ಲೈ ಮೊಟೊ ತಾಂಡೊ ಹೊತ್ತೊ, ಅನಿ ಜೆಜು ಥೈತ್ನಾ ಗೆಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಅವನಾರೆಂಬದು ಸ್ವಸ್ಥವಾದವನಿಗೆ ತಿಳಿದಿರಲಿಲ್ಲ; ಆ ಸ್ಥಳದಲ್ಲಿ ಜನರ ಗುಂಪು ಇದ್ದದರಿಂದ ಯೇಸು ಸರಕೊಂಡುಹೋಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಗುಣಹೊಂದಿದ್ದ ವ್ಯಕ್ತಿಗೆ ತನ್ನನ್ನು ಗುಣಪಡಿಸಿದವನು ಯಾರೆಂಬುದು ಗೊತ್ತಿರಲಿಲ್ಲ. ಆ ಸ್ಥಳದಲ್ಲಿ ಅನೇಕ ಜನರಿದ್ದರು. ಯೇಸು ಆ ಸ್ಥಳದಿಂದ ನುಸುಳಿಕೊಂಡು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು. ಅಧ್ಯಾಯವನ್ನು ನೋಡಿ |