ಯೋಹಾನ 5:7 - ದೆವಾಚಿ ಖರಿ ಖಬರ್7 ತ್ಯಾ ಶಿಕ್ ಮಾನ್ಸಾನ್ “ಸಾಯ್ಬಾ ಪಾನಿ ಹಲ್ವಲ್ಲ್ಯಾ ತನ್ನಾ ಮಾಕಾ ತಳ್ಯಾತ್ ಘೆವ್ನ್ ಜಾತಲೊ ಕೊನ್ಬಿ ನಾ, ಮಿಯಾ ಜಾವ್ಕ್ ಮನುನ್ ಬಗಲ್ಲ್ಯಾ ತನ್ನಾ ದುಸ್ರೆಚ್ ಕೊನ್ಬಿ ಮಾಜ್ಯಾನ್ ಅದ್ದಿ ಜಾವ್ನ್ ಸೊಡ್ತ್ಯಾತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ರೋಗಿಯು - ಸ್ವಾಮೀ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವವರು ಒಬ್ಬರೂ ಇಲ್ಲ; ನಾನು ಬರುವದರೊಳಗೆ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿ |