ಯೋಹಾನ 7:12 - ದೆವಾಚಿ ಖರಿ ಖಬರ್12 ಥೈ ಲೊಕಾಂಚ್ಯಾ ತಾಂಡ್ಯಾತ್ ಜೆಜುಚ್ಯಾ ವಿಶಯಾತ್ ಲೈ ಪುಸ್ಪುಸುನ್ ಬೊಲುಲಾಗಲ್ಲ್ಯಾನಿ. ಉಲ್ಲ್ಯಾ ಲೊಕಾನಿ “ತೊ ಬರೊ ಮಾನುಸ್” ಮಟ್ಲ್ಯಾನಿ ಅನಿ ಹುರಲ್ಲ್ಯಾನಿ, “ನಾ, ತೊ ಲೊಕಾಕ್ನಿ ಪಸ್ವುಲಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿ |